ಬೆಳ್ತಂಗಡಿ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನೆ

0


ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್, ರೋಟರಿ ಕ್ಲಬ್ ಇಂದಿರಾನಗರ ಬೆಂಗಳೂರು ಮತ್ತು ಬೆಂಗಳೂರಿನ ಜಿ. ಐ. ಆಟೋ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಹಕಾರದೊಂದಿಗೆ ಸುಮಾರು, ರೂ 9 ಲಕ್ಷಕ್ಕೂ ಅಧಿಕ ಮೊತ್ತದಲ್ಲಿ ಸಂಪೂರ್ಣ ನವೀಕರಿಸಿದ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ ಎ.19ರಂದು ತಾಲೂಕು ಪಶು ಆಸ್ಪತ್ರೆಯ ವಠಾರದಲ್ಲಿ ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನವೀಕೃತ ಪಶು ಆಸ್ಪತ್ರೆಯ ಆಪರೇಷನ್ ಥಿಯೇ ಟರ್ ಉದ್ಘಾಟಿಸಿ ಶುಭ ಹಾರೈಸಿದರು, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಜಿ ಐ ಆಟೋ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ರೋ. ಜಗದೀಶ್ ಮುಗುಳಿ, ರೋಟರಿ ಕ್ಲಬ್ ಇಂದಿರಾನಗರ ಬೆಂಗಳೂರಿನ ಅಧ್ಯಕ್ಷೆ ರೋ. ಸುಪ್ರಿಯಾ ಖಾಂಡರಿ, ಕಾರ್ಯದರ್ಶಿ ರೋ ನರಸಿಂಹನ್ ಕಣ್ಣನ್, ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಪಶು ಸಂಗೋಪನೆ ಇಲಾಖೆಯ ಜಂಟಿ ನಿರ್ದೇಶಕ ಡಾ. ಶಿವಣ್ಣ,
ಮಂಗಳೂರು ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ. ಅರುಣ್ ಕುಮಾರ್ ಶೆಟ್ಟಿ, ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿವಾಹಕ ಭವಾನಿ ಶಂಕರ್, ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್ ಉಪಸ್ಥಿತರಿದ್ದರು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ನ್ಯಾಯವಾದಿ ಬಿ. ಕೆ. ಧನಂಜಯ ರಾವ್ ಕಾರ್ಯಕ್ರಮ ನಿರೂಪಿಸಿದರು.

ಸಹಕಾರ ನೀಡಿದ ಜಿ ಐ ಆಟೋ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಜಗದೀಶ್ ಮುಗುಳಿ, ಮಾಲತಿ ಜಗದೀಶ್ ದಂಪತಿ, ರೋಟರಿ ಕ್ಲಬ್ ಇಂದಿರಾ ನಗರ ಅಧ್ಯಕ್ಷೆ ಸುಪ್ರಿಯಾ ಖಾ0ಡರಿ, ಕಾರ್ಯದರ್ಶಿ ನರಸಿಂಹ ಕಣ್ಣನ್,ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ, ಕಾರ್ಯದರ್ಶಿ ಸಂದೇಶ್ ರಾವ್, ಪಶು ಸಂಗೋಪನಾ ಇಲಾಖೆಯ ಅಧಿಕಾರಿ ಗಳಾದ ಡಾ. ಶಿವಣ್ಣ, ಡಾ. ಅರುಣ್ ಕುಮಾರ್ ಶೆಟ್ಟಿ, ಗುತ್ತಿಗೆದಾರ ಇಂಜಿನಿಯರ್ ಶ್ರವಣ್ ಕಾಂತಾಜೆ, ಮಂಗಳೂರು ಏನಿಮಲ್ ಕ್ರಾಫ್ಟ್ ಸಂಸ್ಥೆಯ ಸುಮನಾ ಪರವಾಗಿ ಮಮತಾ ಇವರನ್ನು ರೋಟರಿ ಕ್ಲಬ್ ಮತ್ತು ಪಶು ಸಂಗೋಪನಾ ಇಲಾಖೆ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಬೆಂಗಳೂರು ಇಂದಿರಾ ನಗರ ಕ್ಲಬ್ ಪದಾಧಿಕಾರಿಗಳು, ಸದಸ್ಯರು, ಪಶು ಆಸ್ಪತ್ರೆಯ ವೈದ್ಯರು, ಸಿಬ್ಬಂದಿ, ನಾಗರಿಕರು ಹಾಜರಿದ್ದರು.

ಬೆಳ್ತಂಗಡಿ ತಾಲೂಕು ಪಶು ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ರವಿ ಕುಮಾರ್ ವಂದಿಸಿದರು.

LEAVE A REPLY

Please enter your comment!
Please enter your name here