
ಉಜಿರೆ: ದುರ್ಗಾಮಾತೃ ಮಂಡಳಿಯಲ್ಲಿ ಹಾಗೂ ಸೇವಾಭಾರತಿಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ವಸಂತಿ ಗೌಡ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ಏ. 21ರಂದು ದೇಣಿಗೆಯನ್ನು ನೀಡಿ ಸಹಕರಿಸಿದ್ದಾರೆ. ಸೇವಾಭಾರತಿ ಸಂಸ್ಥೆಯ ಅಧ್ಯಕ್ಷೆ ಸ್ವರ್ಣಗೌರಿ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.