Site icon Suddi Belthangady

ತೆಕ್ಕಾರು ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಸಮಾಲೋಚನ ಸಭೆ: ತಾಲೂಕಿನಿಂದ ಹೊರ ಕಾಣಿಕೆ

ತೆಕ್ಕಾರು: ಏ.25ರಿಂದ ಮೇ. 3ರವರೆಗೆ ಗ್ರಾಮದಲ್ಲಿರುವ ಶ್ರೀ ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕು ಮಟ್ಟದಿಂದ ಹೊರ ಕಾಣಿಕೆ ಸಮರ್ಪಿಸುವ ಬಗ್ಗೆ ಸಮಾಲೋಚನ ಸಭೆಯನ್ನು ನಡೆಸಲಾಯಿತು.

ತಾಲೂಕಿನ ಪ್ರತಿ ಗ್ರಾಮದಿಂದ ಹೊರೆ ಕಾಣಿಕೆ ತೆಗೆದುಕೊಂಡು ಬರುವುವಂತೆ ವಿನಂತಿಸಲಾಯಿತು. ಏ. 27ರಂದು ಬೆಳಿಗ್ಗೆ ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನ ಹಾಗೂ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಿಂದ ಏಕಕಾಲದಲ್ಲಿ ಹೊರೆ ಕಾಣಿಕೆ ಉದ್ಘಾಟನೆಗೊಳ್ಳಲಿದ್ದು, ಪ್ರತಿ ಗ್ರಾಮದ ಭಕ್ತರು ಹೊರಕಾಣಿಕೆ ಸಮರ್ಪಿಸಬೇಕೆಂದು ಹಾಗೂ ಏ. 4ರಂದು ಪ್ರತಿಷ್ಠಾ ದಿವಸದಂದು ತಾಲೂಕಿನ ಎಲ್ಲಾ ಹಿಂದೂ ಬಂಧುಗಳು ಬೃಹತ್ ಸಂಖ್ಯೆಯಲ್ಲಿ ಬರಬೇಕೆಂದು ವಿನಂತಿಸಿಕೊಳ್ಳಲಾಯಿತು.

ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಶಶಿಧರ್ ಶೆಟ್ಟಿ ಬರೋಡ ಕಾರ್ಯಾಧ್ಯಕ್ಷ ಲಕ್ಷ್ಮಣ್, ಪ್ರಧಾನ ಸಂಚಾಲಕ ಹರೀಶ್ ಪೂಂಜ ಹಾಗೂ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಹಾಗೂ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಕಾರ್ಯದರ್ಶಿ ನವೀನ್ ನೆರಿಯ ಹಾಗೂ ತಾಲೂಕಿನ ಎಲ್ಲಾ ಧಾರ್ಮಿಕ ಮುಖಂಡರುಗಳು ಉಪಸ್ಥಿತರಿದ್ದರು.

Exit mobile version