
ಬೆಳ್ತಂಗಡಿ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಶ್ರದ್ಧಾಂಜಲಿ ಸಭೆ ಹಾಗೂ ಪ್ರತಿಭಟನೆ ಎ. 23ರಂದು ಸಂಜೆ ಉಜಿರೆ ಪೇಟೆಯಲ್ಲಿ ನಡೆಯಿತು.

ಉಜಿರೆ ಪೇಟೆಯಿಂದ ಬೆಳಾಲು ಕ್ರಾಸ್ ವರೆಗೆ ಜಾಥಾದ ಮೂಲಕ ಪ್ರತಿಭಟನೆ ನಡೆಸಿ ದಾಳಿಯಲ್ಲಿ ಮೃತಪಟ್ಟವರಿಗೆ ಉಜಿರೆ ವೃತ್ತದ ಸುತ್ತ ದೀಪ ಹಚ್ಚಿ ಶ್ರದ್ಧಾಂಜಲಿ ಸಲ್ಲಿಸಿ ಮೌನ ಪ್ರಾರ್ಥನೆ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಹಾಗೂ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕ್ಕಡ ಮಾತನಾಡಿದರು.
ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ, ದಿನೇಶ್ ಚಾರ್ಮಾಡಿ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ವಿಷ್ಣು ಮರಾಠೆ, ರಮೇಶ್ ಮುಂಡತ್ತೋಡಿ, ರವಿಚಕ್ಕಿತ್ತಾಯ, ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಮತ್ತಿತರರು ಭಾಗವಹಿಸಿದ್ದರು.