
ಅಂಡಿಂಜೆ: ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟದ ಮುಂದಿನ ಐದು ವಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಏ.26ರಂದು ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳ ಗೆಲ್ಲಿಸುವ ದೃಷ್ಟಿಯಿಂದ ಬೆಳ್ತಂಗಡಿ ತಾಲೂಕಿನ ಅಂಡಿಂಜೆ ಗ್ರಾಮದಲ್ಲಿ ಮಹಾಶಕ್ತಿ ಕೇಂದ್ರದ ಪೂರ್ವಭಾವಿ ಸಭೆಯು ಏ.23 ರಂದು ನಡೆಯಿತು. ಸಭೆಯಲ್ಲಿ ಮಂಡಲ ಕಾರ್ಯದರ್ಶಿ ಪ್ರಶಾಂತ ಪಾರೆಂಕಿ, ಮಂಡಲಾಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ಮರೋಡಿ ಹಾಗೂ ಇತರರು ಉಪಸ್ಥಿತರಿದ್ದರು.