ಬಂಗಾಡಿ: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ ಕಳೆದ 4 ದಿನದಿಂದ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಇಲ್ಲದ ಕಾರಣ, ಗ್ರಾ.ಪಂ.ಗಳಲ್ಲಿ ಆನ್‌ಲೈನ್ ಕೆಲಸ ಕಾರ್ಯಗಳನ್ನು ಮಾಡಲು ಸಮಸ್ಯೆಯಾಗಿದೆ. ಇದರಿಂದ ಬಿಎಸ್‌ಎನ್‌ಎಲ್ ಕಂಪೆನಿ ವಿರುದ್ಧ ಆಕ್ರೋಶಗೊಂಡ ಗ್ರಾಹಕರು ಸಂಬಂಧಪಟ್ಟ ಇಲಾಖೆಯವರು ಆದಷ್ಟು ಬೇಗ ಸಮಸ್ಯೆ ಬಗೆಹರಿಸಲಿ, ಇಲ್ಲದೆ ಹೋದರೆ ಗುಜರಿಗೆ ಮಾರಾಟ ಮಾಡಲಿ ಎಂದು ಕಿಡಿಕಾರಿದ್ದಾರೆ.
ಬಂಗಾಡಿಯಲ್ಲಿ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಮಸ್ಯೆ-ಗ್ರಾಹಕರ ಆಕ್ರೋಶ
