
ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಏ. 24ರಂದು ಪಂಚಾಯತ್ ವ್ಯಾಪ್ತಿಯ ಅಧ್ಯಕ್ಷರುಗಳ ಸಭೆ ನಡೆಯಿತು.
ಸಭೆಯಲ್ಲಿ ಮಂಗಳೂರಿನಲ್ಲಿ ಶನಿವಾರ ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ಗ್ಯಾಸ್ ಮತ್ತು ಡಿಸೇಲ್ ಬೆಲೆ ಏರಿಕೆ ವಿರುದ್ಧ ನಡೆಯುವ ಪ್ರತಿಭಟನೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಅತೀ ಹೆಚ್ಚು ಕಾರ್ಯಕರ್ತರು ಭಾಗವಹಿಸಲು ತೀರ್ಮಾನಿಸಲಾಯಿತು.

ಜಿಲ್ಲಾ ಕೆ.ಎಂ.ಎಫ್ ನಿರ್ದೇಶಕರ ಚುನಾವಣೆಯ ಬಗ್ಗೆ ಚರ್ಚಿಸಲಾಯಿತು. ಹಾಗೂ ಮುಂದಿನ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗೆ ಈಗಿಂದಲೇ ಕಾರ್ಯಪ್ರವರ್ತರಾಗುವಂತೆ ಮತ್ತು ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಸಭೆಯಲ್ಲಿ ತಿಳಿಸಲಾಯಿತು. ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಹೆಚ್ಚಿನ ಒತ್ತು ನೀಡುವಂತೆ ತಿಳಿಸಲಾಯಿತು.
ಸಭೆಯಲ್ಲಿ ಬ್ಲಾಕ್ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ, ಕೆ.ಪಿ.ಸಿ.ಸಿ ಸದಸ್ಯರಾದ ಕೇಶವ ಗೌಡ ಪಿ ಬೆಳಾಲು,ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು, ಗ್ಯಾರಂಟಿ ಸಮಿತಿಯ ಜಿಲ್ಲಾ ಉಪಾದ್ಯಕ್ಷ ಶೇಖರ್ ಕುಕ್ಕೇಡಿ, ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾದ ಅಬ್ದುಲ್ ಕರೀಮ್ ಗೇರುಕಟ್ಟೆ, ಸೆಬಾಸ್ಟಿಯನ್, ಮಹಿಳಾ ಘಟಕದ ವಂದನಾ ಭಂಡಾರಿ ಅಂಡಿಂಜೆ, ಸೇವಾದಳದ ನಗರ ಅಧ್ಯಕ್ಷ ಇಸುಬು ಇಳಂತಿಲ, ಪ್ರದೀಪ್, ಪಂಚಾಯತ್ ರಾಜ್ ಅಧ್ಯಕ್ಷ ರೋಯ್, ಹಿಂದುಳಿದ ವರ್ಗದ ಅಧ್ಯಕ್ಷರಾದ ದಯಾನಂದ ದೇವಾಡಿಗ, ವಿಠಲ್ ಭಟ್, ಅಶ್ರಫ್ ನೆರಿಯ, ರಮೇಶ್ ಪಡ್ಡಾಯಿ ಮಜಲು, ರಜತ್ ಗೌಡ ಹಾಗೂ ತಾಲೂಕಿನ ಎಲ್ಲಾ ಪಂಚಾಯತ್ ಮಟ್ಟದ ಅಧ್ಯಕ್ಷರುಗಳು ಭಾಗವಹಿಸಿದ್ದರು.