ಎ. 27: ಮಾಡೂರುನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

0

ಬೆಳ್ತಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಾಡೂರು ಶಾಖೆಯ ವಾರ್ಷಿಕೋತ್ಸವ ಪ್ರಯುಕ್ತ ಶ್ರೀ ಶಿರಡಿ ಸಾಯಿ ಬಾಬಾ ಮಂದಿರ (ರಿ.) ಮಾಡೂರು ಹಾಗೂ ಶ್ರೀ ವನದುರ್ಗಾ ಅಯ್ಯಪ್ಪ ಭಜನಾ ಮಂದಿರ (ರಿ.) ಇವರ ಜಂಟಿ ಸಹಯೋಗದೊಂದಿಗೆ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ತಪಾಸಣೆ ಚಿಕಿತ್ಸ ಶಿಬಿರವನ್ನು ಎ. 27ರಂದು ಬೆಳಗ್ಗೆ ಸಮಯ 9.30ರಿಂದ ಮದ್ಯಾಹ್ನ 12.30ರವರೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆವರಣ, ಮಾತೃಶ್ರೀ ಕಾಂಪ್ಲೆಕ್ಸ್, ಕೊರಗಜ್ಜನ ಕಟ್ಟೆಯ ಎದುರುಗಡೆ, ಮಾಡೂರು ಇಲ್ಲಿ ಆಯೋಜಿಸಲಾಗಿದೆ.

ಈ ಶಿಬಿರದಲ್ಲಿ ಎ.ಜೆ. ಇನ್‌ಸ್ಟಿಟ್ಯೂಟ್ ಮತ್ತು ಮೆಡಿಕಲ್ ಸೈನ್ಸ್, ಮಂಗಳೂರು, ಇವರ ನುರಿತ ವೈದ್ಯರ ತಂಡದಿಂದ ಮಧುಮೇಹ ತಪಾಸಣೆ, ಬಿ. ಪಿ ತಪಾಸಣೆ , ಕಣ್ಣಿನ ತಪಾಸಣೆ, ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಇತರ ವೈದ್ಯಕೀಯ ಸೇವೆಗಳು, ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವುದು, ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇವರ ನುರಿತ ವೈದ್ಯರ ತಂಡದಿಂದ ದಂತ ತಪಾಸಣೆ, ಹುಳುಕು ಹಲ್ಲುಗಳ ಭರ್ತಿ, ಶುಚಿಗೊಳಿಸುವುದು, ಕೀಳುವುದು ಹಾಗೂ ಸಂಘದ ವತಿಯಿಂದ ಅಗತ್ಯವುಳ್ಳ ಕಣ್ಣಿನ ರೋಗಿಗಳಿಗೆ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗುವುದು.

ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here