
ಬೆಳ್ತಂಗಡಿ: ತಾಲೂಕಿನ ಹೆಚ್ಚಿನ ಭಾಗಗಳಲ್ಲಿ ಏ .26ರಂದು ಸಂಜೆ ಭಾರಿ ಗುಡುಗು, ಸಿಡಿಲು ಗಾಳಿ ಸಹಿತ ಮಳೆ ಸುರಿದಿದೆ.
ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕಿಂಜೆಯ ಕತ್ತರಿಗುಡ್ಡ ಎಂಬಲ್ಲಿ ಹಂಝ ಎಂಬವರ ಮನೆಯ ಶೀಟುಗಳು ಹಾರಿ ಹೋಗಿದ್ದು ಮನೆಗೆ ಹಾನಿ ಉಂಟಾಗಿದೆ.
ಅನೇಕ ಕಡೆ ಅಡಕೆ, ರಬ್ಬರ್ ಗಿಡಗಳು ಧರಾಶಾಯಿಯಾಗಿವೆ.
ಉಜಿರೆ ಕಾಲೇಜು ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಕಂಬ ತುಂಡಾಗಿ ಸಂಚಾರಕ್ಕೆ ಸಮಸ್ಯೆಯಾಯಿತು.

ಕಡಿರುದ್ಯಾವರದಲ್ಲಿ ಆಲಿಕಲ್ಲು ಸಹಿತ ಮಳೆ ಸುರಿದಿದೆ. ನಿರಂತರ 3ಗಂಟೆ ಭಾರಿ ಗುಡುಗು ಸಿಡಿಲು ಇದ್ದು ವಿದ್ಯುತ್ ಅಂತರ್ಜಾಲ ಸಂಪರ್ಕ ಕೈ ಕೊಟ್ಟಿದೆ.