
ಉಜಿರೆ: ಕಾರ್ಕಳ ನಿವಾಸಿ ಸೈಯದ್ (24) ಎಂಬಾತ ಕಾಲೇಜು ವಿದ್ಯಾರ್ಥಿನಿಯರಿಗೆ ತರಬೇತಿ ನೀಡು ನೆಪದಲ್ಲಿ ಮೊಬೈಲ್ ಫೋನ್ ನಂಬರ್ ತೆಗೆದುಕೊಂಡು ಅಶ್ಲೀಲ ಸಂದೇಶ ಮತ್ತು ವಿಡಿಯೋ ಕಳುಹಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ಏ.27 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಡಿಕೇರಿ ನಿವಾಸಿಯಾಗಿದ್ದು, ಉಜಿರೆ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿರುವ ಹದಿನೇಳರ ಹರೆಯದ ಯುವತಿಯ ಫೋನ್ ನಂಬರ್ ತೆಗೆದುಕೊಂಡು ಅಶ್ಲೀಲ ಸಂದೇಶ ಮತ್ತು ವಿಡಿಯೋಗಳನ್ನು ಕಳುಹಿಸಿ ಸಯ್ಯದ್ ಲೈಂಗಿಕ ಕಿರುಕುಳ ನೀಡುತ್ತಿದ್ದ.
ಪದೇಪದೇ ವಿಡಿಯೋ ಕರೆಗಳನ್ನು ಮಾಡುತ್ತಿದ್ದ ಎಂದು ವಿದ್ಯಾರ್ಥಿನಿ ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಮನೆಯವರು, ವಿದ್ಯಾರ್ಥಿಗಳು ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಒಟ್ಟು ಸೇರಿ ಯುವಕನನ್ನು ಪತ್ತೆ ಹಚ್ಚಿ ಬೆಳ್ತಂಗಡಿ ಠಾಣಾ ಪೊಲೀಸರಿಗೆ ಒಪ್ಪಿಸಿದ್ದಾರೆ. ಈತ ವಾಲಿಬಾಲ್ ತರಬೇತಿ ನೀಡುತ್ತಿದ್ದು ಈ ವೇಳೆ ವಿದ್ಯಾರ್ಥಿನಿಯ ಪರಿಚಯವಾಗಿತ್ತು ಎಂದು ತಿಳಿದು ಬಂದಿದೆ. ಸಯ್ಯದ್ ನ ಮೊಬೈಲ್ ಫೋನ್ ಪರಿಶೀಲಿಸಿದಾಗ ಹಲವು ವಿದ್ಯಾರ್ಥಿನಿಯರ ಅಶ್ಲೀಲ ಚಿತ್ರ ಮತ್ತು ವಿಡಿಯೋ ನೋಡಿ ದೊರೆತಿದೆ ಎಂದು ಮಾಹಿತಿ ಲಭ್ಯವಾಗಿದೆ.