ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ ಯೋಜನೆಗೆ ಅರ್ಜಿ ಆಹ್ವಾನ

0

ಬೆಳ್ತಂಗಡಿ: ದ್ವಿತೀಯ ಪಿಯುಸಿ ಹಾಗೂ ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಫಲಿತಾಂಶಗಳ ಮೂಲಕ ರಾಜ್ಯದ ಗಮನ ಸೆಳೆದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಮಾಜದ ಎಲ್ಲಾ ಸ್ತರದ ವಿದ್ಯಾರ್ಥಿಗಳಿಗೂ ಉನ್ನತ ವ್ಯವಸ್ಥೆಯಡಿಯಲ್ಲಿ ಹೈಟೆಕ್ ಸೌಲಭ್ಯದೊಂದಿಗೆ ಪಿ. ಯು. ಶಿಕ್ಷಣ ಹಾಗೂ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ದೊರಕಿಸಿಕೊಡಬೇಕೆಂಬ ಮಹಾದಾಸೆಯಿಂದ ‘ಕ್ರಿಯೇಟಿವ್ ಹೊಂಗಿರಣ’ ಯೋಜನೆ ರೂಪಿಸುತ್ತಿದೆ.

ಈ ಯೋಜನೆಯಡಿಯಲ್ಲಿ 100 ಅರ್ಹ ವಿದ್ಯಾರ್ಥಿಗಳು ಕ್ರಿಯೇಟಿವ್ ಸಂಸ್ಥೆಯ ಉಡುಪಿ ಶಾಖೆಯಲ್ಲಿ ಸಂಪೂರ್ಣ ಉಚಿತ ಶಿಕ್ಷಣ ಅಥವಾ ಪ್ರೋತ್ಸಾಹ ಧನದೊಂದಿಗೆ ಪಿ. ಯು ಶಿಕ್ಷಣ ಪಡೆಯುವ ಅವಕಾಶವಿರುತ್ತದೆ. ಈ ಯೋಜನೆಗೆ ವಿಜ್ಞಾನ ವಿಭಾಗ ಸೇರಲಿಚ್ಛಿಸುವ ಯಾವುದೇ ವಿದ್ಯಾರ್ಥಿ WWW.creativeedu.in ಮುಖಾಂತರ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಗಳ ಸಾಧಿಸುವ ಛಲಕ್ಕೆ ಬೆನ್ನೆಲುಬಾಗಿ ನಿಂತಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಸಾಧನೆ ಮಾಡುವ ಹಂಬಲ ಇರುವ ವಿದ್ಯಾರ್ಥಿಗಳಿಗೆ ಸದಾ ಮಾರ್ಗದರ್ಶನ ನೀಡುತ್ತಿದೆ. ಪೋಷಕರ ಹಾಗೂ ಪಾಲಕರ ಭರವಸೆಯನ್ನು ಈಡೇರಿಸುವಲ್ಲಿ ನಿರಂತರ ಶ್ರಮಿಸುತ್ತಿರುವ ವಿದ್ಯಾ ಸಂಸ್ಥೆಯಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: +919606474298

LEAVE A REPLY

Please enter your comment!
Please enter your name here