ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಟೋ ಓಡಿಸಿಕೊಂಡು ಜೀವನ ಮಾಡುತ್ತಿದ್ದ ದೊಂಡೋಲೆಯ ಲಕ್ಷ್ಮಣ ಗೌಡ (56ವ) ಹೃದಯಾಘಾತದಿಂದ ನಿಧನರಾಗಿದ್ದಾರೆ. ಎ. 28ರಂದು ಬೆಳಗ್ಗೆ ಧರ್ಮಸ್ಥಳದಲ್ಲಿ ಆಟೋ ಚಾಲನೆ ಮಾಡುವಾಗ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ನಂತರ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನಲ್ಲಿ ಅವರು ಕೊನೆಯುಸಿರೆಳೆದರು. ಅವರು ಪತ್ನಿ ಲೀಲಾ, ಮಕ್ಕಳಾದ ಚೇತನ್, ಶ್ವೇತಾ ರವರನ್ನು ಅಗಲಿದ್ದಾರೆ.
ದೊಂಡೋಲೆ ಲಕ್ಷ್ಮಣ ಗೌಡ ಹೃದಯಾಘಾತದಿಂದ ನಿಧನ
