
ನಡ: ಸ್ಟಾರ್ ಲೈನ್ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾವಂತ ಯತೀಂ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಈ ವಿದ್ಯಾಸಂಸ್ಥೆಯು 8ನೇ ವರ್ಷಕ್ಕೆ ಯಶಸ್ವಿಯಾಗಿ ಪಾದರ್ಪಣೆ ಮಾಡುವ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಜನಾಬ್ ಸೈಯದ್ ಹಬೀಬ್ ಸಾಹೇಬ್ ಅವರ ಕನಸಿನಂತೆ ತಾಲೂಕಿನ ಪ್ರತಿಭಾವಂತ “ಯತೀಂ” ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಾಧನೆಗೈದ ಕ್ರೀಡಾಪಟು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಮೇ. 15ರ ಒಳಗಾಗಿ ಸೂಕ್ತ ದಾಖಲೆಗಳೊಂದಿಗೆ ಶಾಲಾ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಬೇಕಾಗಿ ಆಡಳಿತ ಟ್ರಸ್ಟಿನ ಕಾರ್ಯದರ್ಶಿ ಸೈಯದ್ ಅಯ್ಯುಬ್ ತಮ್ಮ ಶಾಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.