ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇಲ್ಲಿನ ಕನ್ನಡ ವಿಭಾಗ ಹಾಗೂ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳ್ಳಿ, ಶ್ರೀ ಗುರುದೇವಾ ಪ್ರಥಮದರ್ಜೆ ಕಾಲೇಜು ಬೆಳ್ತಂಗಡಿ ಇದರ ಸಹಯೋಗದಲ್ಲಿ ಎ. 29ರಂದು 10 ಗಂಟೆಗೆ ಶ್ರೀ ಗುರುದೇವಾ ಪ್ರಥಮ ದರ್ಜೆ ಕಾಲೇಜಿನ ಸಭಾಭವನದಲ್ಲಿ “ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ” ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಸವಿತಾ ವಹಿಸಿಕೊಂಡು ಅಧ್ಯಕ್ಷೀಯ ನುಡಿಗಳನ್ನಾಡಿದರು. ಎಸ್. ಡಿ. ಎಮ್ ಉಜಿರೆ ಕಾಲೇಜಿನ ಕನ್ನಡ ಉಪನ್ಯಾಸಕ ರಾಜಶೇಖರ ಹಳೆಮನೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಎಸ್.ಡಿ.ಎಮ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ನಾಗಣ್ಣ ಡಿ.ಎ. ಪ್ರಧಾನ ಉಪನ್ಯಾಸವನ್ನು ನೀಡಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕರು, ಉಪ ಪ್ರಾಂಶುಪಾಲ ಬಿ.ಎ ಶಮಿವುಲ್ಲ ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಗುರುದೇವಾ ಕಾಲೇಜಿನ ಉಪನ್ಯಾಸಕ ವೃಂದ, ಕಛೇರಿ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಿರೂಪಣೆಯಲ್ಲಿ ಲಕ್ಷ್ಮಿಶ್ರೀ ಹಾಗು ದೀಕ್ಷಾ ಸಹಕರಿಸಿದರು. ಕನ್ನಡ ಭಾಷಾ ಉಪನ್ಯಾಸಕ ಸತೀಶ್ ಸಾಲ್ಯಾನ್ ಕಾರ್ಯಕ್ರಮಕ್ಕೆ ವಂದಿಸಿದರು.