ಕೊಕ್ಕಡ: ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಉಪ್ಪಾರಪಳಿಕೆ, ಶ್ರದ್ಧಾ ಗೆಳೆಯರ ಬಳಗ ಉಪ್ಪಾರಪಳಿಕೆ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಪ್ರಾರಂಭೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಉಪ್ಪಾರಪಳಿಕೆಯಲ್ಲಿ ನವೀಕೃತ ಶ್ರೀ ಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ಕಾರ್ಯಕ್ರಮವು ಎ. 30ರಂದು ನಡೆಯಲಿದೆ.
ಬೆಳಿಗ್ಗೆ ಗಂಟೆ 7.00ಕ್ಕೆ ಗಣಹೋಮ, 8ಕ್ಕೆ ನವೀಕೃತ ಭಜನಾ ಮಂದಿರದ ಪ್ರಾರಂಭೋತ್ಸವ, ಬಳಿಕ ಸಾಮೂಹಿಕ ಹನುಮಾನ್ ಚಾಲಿಸ್ ಪಠಣ, 10.30ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ಮಹಾಪೂಜೆ ಬಳಿಕ ಅನ್ನ ಸಂತರ್ಪಣೆ, ಸಂಜೆ ಗಂಟೆ 4 ರಿಂದ ಆಹ್ವಾನಿತ ಭಜನಾ ತಂಡಗಳಿಂದ ಕುಣಿತ ಭಜನೋತ್ಸವ, 7ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ, ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ ಗಂಟೆ 9.30ರಿಂದ ಚಿದಾನಂದ ಅದ್ಯಪಾಡಿ ನಿರ್ದೇಶನದ ವಿಧಾತ್ರೀ ಕಲಾವಿದೆರ್ ಕೈಕಂಬ ಕುಡ್ಲ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಇವರ ಸಲಹೆ ಸಹಕಾರದೊಂದಿಗೆ ವಿಭಿನ್ನ ಶೈಲಿಯಲ್ಲಿ ‘ದೈವರಾಜೆ ಶ್ರೀ ಬಬ್ಬು ಸ್ವಾಮಿ’ ಭಕ್ತಿಪ್ರದಾನ ತುಳು ನಾಟಕ ನಡೆಯಲಿದೆ.