Site icon Suddi Belthangady

ರಿಕ್ಷಾ ಡಿಕ್ಕಿ: ಎಎಸ್‌ಐಗೆ ಗಾಯ

ಬೆಳ್ತಂಗಡಿ: ಇಳಂತಿಲ ಗ್ರಾಮದ ಪೆದಮಲೆ ಎಂಬಲ್ಲಿ ಎ.30ರಂದು ತಡ ರಾತ್ರಿ ರಿಕ್ಷಾವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪುಂಜಾಲಕಟ್ಟೆ ಪೊಲೀಸ್ ಠಾಣಾ ಸಹಾಯಕ ಸಬ್ ಇನ್ಸ್ ಪೆಕ್ಟರ್ ಗಣೇಶ್ ಪ್ರಸಾದ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ.

ಪುಂಜಾಲಕಟ್ಟೆ ಪೊಲೀಸ್ ಠಾಣೆಯಿಂದ ಇಳಂತಿಲದ ಪೆದಮಲೆ ಎಂಬಲ್ಲಿರುವ ತನ್ನ ಮನೆಗೆ ಬೈಕ್‌ನಲ್ಲಿ ಬರುತ್ತಿದ್ದಾಗ ಎದುರುಗಡೆಯಿಂದ ವೇಗವಾಗಿ ಬಂದ ರಿಕ್ಷಾವೊಂದು ಡಿಕ್ಕಿ ಹೊಡೆದಿದೆ. ಈ ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಪುತ್ತೂರು ಆಸ್ಪತ್ರೆಗೆ ದಾಖಲಿಸಿದರಾದರೂ, ಹೆಚ್ಚಿನ ಚಿಕಿತ್ಸೆಯ ಅಗತ್ಯತೆ ಕಂಡು ಬಂದ ಕಾರಣ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಪುತ್ತೂರು ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version