
ಲಾಯಿಲ: ಗ್ರಾ.ಪಂ. ವ್ಯಾಪ್ತಿಯಲ್ಲಿ ಎ.30ರಂದು ಸಂಭವಿಸಿದ ಭಾರೀ ಗಾಳಿ ಮಳೆಗೆ ಲಾಯಿಲ ಗ್ರಾಮದ ಮೂರನೇ ವಾರ್ಡಿನ ಸಂಗಾತಿ ನಗರ ಎಂಬಲ್ಲಿ ದೊಡ್ಡ ಮರವೊಂದು ರಸ್ತೆಗೆ ಉರುಳಿಬಿದ್ದು ಸಾರ್ವಜನಿಕರಿಗೆ ತೊಂದರೆಯಾಗಿತ್ತು. ವಿದ್ಯುತ್ ಕಂಬಗಳಿಗೂ ಹಾನಿ ಉಂಟಾಗಿತ್ತು. ಇದಕ್ಕೆ ತಕ್ಷಣ ಸ್ಪಂದಿಸಿದ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ಗಣೇಶ್ ಆರ್., ಅರವಿಂದ ಕುಮಾರ್, ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್ ಸ್ಥಳೀಯರ ಹಾಗೂ ಪಂಚಾಯತ್ ಸಹಕಾರದಲ್ಲಿ ರಸ್ತೆಗೆ ಉರುಳಿ ಬಿದ್ದ ಮರವನ್ನು ತೆರವುಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಬಗ್ಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಲಾಯಿಲ ಗ್ರಾಮದ ಹಲವು ಕಡೆಗಳಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು, ತಂತಿಗಳು ತುಂಡಾಗಿ ಬಿದ್ದು ವಿದ್ಯುತ್ ವ್ಯತ್ಯಾಯ ಉಂಟಾಗಿದೆ. ಈಗಾಗಲೇ ಮೆಸ್ಕಾಂ ಪವರ್ ಮ್ಯಾನ್ ಗಳು ಸರಿಪಡಿಸಲು ಬೇಕಾದ ಕ್ರಮಗಳನ್ನು ಕೈಗೊಂಡಿದ್ದಾರೆ.