Site icon Suddi Belthangady

ಮುಂಡಾಜೆ ಕ್ರೈಸ್ಟ್ ಅಕಾಡೆಮಿಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ.100 ಫಲಿತಾಂಶ


ಮುಂಡಾಜೆ: ಕ್ರೈಸ್ಟ್ ಅಕಾಡೆಮಿಯ ವಿದ್ಯಾರ್ಥಿಗಳು ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದುಕೊಂಡಿದ್ದಾರೆ.

ಈ ಬಾರಿಯ ಐ.ಸಿ.ಎಸ್. ಇ ಯ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದೆ. ಮುಂಡಾಜೆ ಕ್ರೈಸ್ಟ್ ಅಕಾಡೆಮಿಯ ಪ್ರಥಮ‌ ಎಸ್.ಎಸ್.ಎಲ್.ಸಿ ಬ್ಯಾಚ್ ನಲ್ಲಿ ಪರೀಕ್ಷೆಗೆ ಕುಳಿತ ಎಲ್ಲ 11 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 6 ಮಂದಿ ಉನ್ನತ ಶ್ರೇಣಿಯಲ್ಲಿ ಹಾಗೂ 5 ಮಂದಿ ವಿದ್ಯಾರ್ಥಿಗಳು ಫಸ್ಟ್ ಕ್ಲಾಸ್ ನಲ್ಲಿ ಉತ್ತೀರ್ಣರಾಗಿದ್ದಾರೆ.

ಇಲ್ಲಿನ ವಿದ್ಯಾರ್ಥಿನಿ ಫಾತಿಮಾ ಅನುಫಾ 90% ಅಂಕಗಳೊಂದಿಗೆ ಪ್ರಥಮ ಸ್ಥಾನವನ್ನು ಹಾಗೂ ತ್ರಿಶಾ ರೈ 85% ಅಂಕಗಳೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಎಂದು ಸಂಸ್ಥೆಯ ಪ್ರಾಂಶುಪಾಲ ಫಾ ಮ್ಯಾಥ್ಯೂ ಎ.ಜೆ ತಿಳಿಸಿದ್ದಾರೆ.

Exit mobile version