
ಬೆಳ್ತಂಗಡಿ: ಶಾಂತಗೊಳ್ಳುತ್ತಿದ್ದ ಮಂಗಳೂರು ಮತ್ತೆ ಉದ್ವಿಘ್ನಗೊಂಡಿದೆ. ಮೇ. 2ರಂದು ರಾತ್ರಿ ಬಜಪೆಯ ಕಿನ್ನಿಪದವುನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಿಂದ ಮಂಗಳೂರಿನಲ್ಲಿ ಆಕ್ರೋಶದ ಜ್ವಾಲೆ ಭುಗಿಲೆದ್ದಿದೆ. ವಿಶ್ವ ಹಿಂದೂ ಪರಿಷತ್ ಹಿಂದೂ ಕಾರ್ಯಕರ್ತನ ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಬಂದ್‌ಗೆ ಕರೆ ನೀಡಿದೆ.


ಕಾಲೇಜು ವಿದ್ಯಾರ್ಥಿಗಳು ಬಸ್ ಇಲ್ಲದೆ ವಾಪಸ್ಸು ಮನೆಗೆ ತೆರಳುತ್ತಿದ್ದಾರೆ. ಈಗಾಗಲೇ ಕಾಲೇಜಿಗೆ ಬಂದಿರುವ ವಿದ್ಯಾರ್ಥಿಗಳು ಖಾಸಗಿ ವಾಹನಗಳ ಮೊರೆ ಹೋಗುತ್ತಿದ್ದಾರೆ. ಬೆಳ್ತಂಗಡಿ, ಉಜಿರೆ , ಚಾರ್ಮಾಡಿ, ಕಕ್ಕಿಂಜೆ, ನೆರಿಯ ಹಾಗೂ ತಾಲೂಕಿನ ನಾನಾ ಭಾಗಗಳಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡುತ್ತಿರುವುದು ಕಂಡುಬರುತ್ತಿದೆ. ಮೇಲಂತಬೆಟ್ಟು ಸಮೀಪ ಬಸ್ಸಿಗೆ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ.


ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಮೇ. 5ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಸುಹಾಸ್ ಶೆಟ್ಟಿ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದವರಿಗೆ ಕಠಿಣ ಶಿಕ್ಷೆಗೆ ಆಗ್ರಹ ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಮಂಗಳೂರು ಪೊಲೀಸರು ಆರೋಪಿಗಳ ಸುಳಿವು ಪತ್ತೆ ಹಚ್ಚಿದ್ದಾರೆ ಎನ್ನಲಾಗುತ್ತಿದೆ.