Site icon Suddi Belthangady

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ: ಹಿಂದೂ ಸಂಘಟನೆಗಳಿಂದ ಬಂದ್‌ಗೆ ಕರೆ – ಅಂಗಡಿ ಮುಂಗಟ್ಟುಗಳು ಬಂದ್ ಮಾಡುವ ಮೂಲಕ ಬಂದ್‌ಗೆ ಬೆಂಬಲ

ಬೆಳ್ತಂಗಡಿ: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಹಿನ್ನೆಲೆ ಹಿಂದೂ ಸಂಘಟನೆಗಳು ದ.ಕ ಜಿಲ್ಲೆ ಬಂದ್‌ಗೆ ಕರೆಕೊಟ್ಟಿದ್ದು, ಇದಕ್ಕೆ ಬೆಂಬಲವಾಗಿ ಬೆಳ್ತಂಗಡಿ ತಾಲೂಕಿನಲ್ಲಿ ಅಂಗಡಿ ಮಾಲಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ.

ತಾಲೂಕಿನ ಧರ್ಮಸ್ಥಳ, ಉಜಿರೆ, ಬೆಳ್ತಂಗಡಿ, ಗುರುವಾಯನಕರೆ,ನೆರಿಯ, ಅರಸಿನಮಕ್ಕಿ, ಶಿಶಿಲ ಸೇರಿದಂತೆ ಹಲವೆಡೆ ಅಂಗಡಿ ಮುಂಗಟ್ಟುಗಳನ್ನು ಭಾಗಶಃ ಬಂದ್ ಮಾಡಿದ್ದಾರೆ. ಸಣ್ಣ ಪುಟ್ಟ ಅಂಗಡಿ ಮುಂಗಟ್ಟುಗಳು ಮಾತ್ರ ತೆರೆದುಕೊಂಡಿದ್ದು, ಎಂದಿನಂತೆ ವಹಿವಾಟು ನಡೆಸುತ್ತಿದ್ದಾರೆ.

ಬಸ್ ವ್ಯವಸ್ಥೆಯನ್ನು ಕೂಡ ತಡೆಹಿಡಿಯಲಾಗಿದ್ದು, ಹಲವೆಡೆ ಪ್ರಯಾಣಿಕರು ಬಸ್ ಇಲ್ಲದೆ ಪರದಾಡುತ್ತಿರುವ ದೃಶ್ಯ ಕಂಡು ಬಂದಿದೆ.

Exit mobile version