
ಬೆಳ್ತಂಗಡಿ: ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ನಡೆಸಿರುವುದನ್ನು ಖಂಡಿಸಿ ವಿವಿಧ ಹಿಂದೂ ಸಂಘಟನೆಗಳು ನೀಡಿದ ಜಿಲ್ಲಾ ಬಂದ್ ಕರೆಯಂತೆ ತಾಲೂಕಿನ ಪ್ರಮುಖ ಪೇಟೆಗಳಲ್ಲಿ ಭಾಗಶಃ ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಆಗಿದ್ದು, ಮುಂಡಾಜೆ, ರೇಷ್ಮೆರೋಡು ಹಾಗೂ ತಾಲೂಕಿನ ನಾನಾ ಭಾಗಗಳಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂ ಕಾರ್ಯಕರ್ತರು ರಸ್ತೆ ಮಧ್ಯೆ ಟಯರ್ ನ್ನು ಹೊತ್ತಿಸಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.