

ಬೆಳ್ತಂಗಡಿ: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಹಿನ್ನೆಲೆ ಹಿಂದೂ ಸಂಘಟನೆಗಳು ದ.ಕ ಜಿಲ್ಲೆ ಬಂದ್ಗೆ ಕರೆಕೊಟ್ಟಿದ್ದು, ಇದಕ್ಕೆ ಬೆಂಬಲವಾಗಿ ಬೆಳ್ತಂಗಡಿ ತಾಲೂಕಿನಲ್ಲಿ ಅಂಗಡಿ ಮಾಲಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ.

ತಾಲೂಕಿನ ಧರ್ಮಸ್ಥಳ, ಉಜಿರೆ ಸೇರಿದಂತೆ ಹಲವೆಡೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.


