Site icon Suddi Belthangady

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮೇ.3ರಂದು ಮಂಗಳೂರಿಗೆ

ಬೆಳ್ತಂಗಡಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಮೇ.3ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಮೇ.3 ರಂದು ಬೆಳಿಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಚಿವರು ಬಳಿಕ ಮಂಗಳೂರು ವಿಮಾನ ನಿಲ್ದಾಣ ರಸ್ತೆ ಮೂಲಕ-ಮಾರ್ಗವಾಗಿ, ಮಂಗಳೂರು ಸರ್ಕ್ಯೂಟ್ ಹೌಸ್ ರಸ್ತೆ ಮೂಲಕ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಲಿದ್ದಾರೆ.

ಬಳಿಕ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಬಗ್ಗೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ರಾತ್ರಿ 7.15ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬೆಂಗಳೂರಿಗೆ ತೆರಳಿದ್ದಾರೆ. ಈ ಬಗ್ಗೆ ಸಚಿವರ ಆಪ್ತ ಕಾರ್ಯದರ್ಶಿ ಕೆ.ಎ ಹಿದಾಯತ್ತುಲ್ಲ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Exit mobile version