ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಶಾಲೆಗೆ ಶೇಕಡಾ ನೂರು ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 29 ವಿದ್ಯಾರ್ಥಿಗಳೂ ತೇರ್ಗಡೆ ಹೊಂದಿದ್ದಾರೆ. ಅತ್ಯುನ್ನತ ಶ್ರೇಣಿಯಲ್ಲಿ 7, ಪ್ರಥಮ ಶ್ರೇಣಿಯಲ್ಲಿ 21 ಮತ್ತು ದ್ವಿತೀಯ ಶ್ರೇಣಿಯಲ್ಲಿ ಓರ್ವ ವಿದ್ಯಾರ್ಥಿ ತೇರ್ಗಡೆಯಾಗಿದ್ದಾರೆ ಎಂದು ಶಾಲೆಯ ಮುಖ್ಯೋಪಾಧ್ಯಾಯಿನಿ ವೃಂದ ಟಿ.ಎಸ್. ತಿಳಿಸಿದ್ದಾರೆ.