Site icon Suddi Belthangady

ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ – ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

ಕೊಕ್ಕಡ: ರಾಜ್ಯದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಮೇ. 4ರಂದು ತಮ್ಮ ಪತ್ನಿಯೊಂದಿಗೆ ಸೌತಡ್ಕದ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಮಹಾಗಣಪತಿ ದೇವಾಲಯದ ಪ್ರಧಾನ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ಅವರು ಸಚಿವ ದಂಪತಿಗಳನ್ನು ಗೌರವಪೂರ್ವಕವಾಗಿ ಸ್ವಾಗತಿಸಿ, ದೇವರ ಪ್ರಸಾದ ನೀಡಿ ಆಶೀರ್ವಾದ ಮಾಡಿದರು.

ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಕೊಕ್ಕಡ ಗ್ರಾಮ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಕಾಂಗ್ರೆಸ್ ಮುಖಂಡರಾದ ವಿಶ್ವನಾಥ ಕೊಲ್ಲಾಜೆ, ದಯಾನೀಶ್, ಗಣೇಶ್ ಕಾಶಿ ಮತ್ತಿತರ ಗಣ್ಯರು ಉಪಸ್ಥಿತರಿದರು.

Exit mobile version