ಅಕ್ರಮ ಗೋ ಸಾಗಾಟ: ಜಯಂತ್ ಗೌಡ ಬಂಧನ

0

ಬೆಳ್ತಂಗಡಿ: ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ವಿರುವ ಉಪ್ಪಿನಂಗಡಿ ಪೊಲೀಸರು ವಾಹನ ಚಾಲಕ ಜಯಂತ್ ಗೌಡ ಎಂಬಾತನನ್ನು ಬಂಧಿಸಿದ್ದಾರೆ.

ಕುಪ್ಪೆಟ್ಟಿಯಲ್ಲಿ ಗೂಡ್ಸ್ ವಾಹನದಲ್ಲಿ ಜಾನುವಾರ ಸಾಗಾಟ ಮಾಡುತ್ತಿದ್ದ ವೇಳೆ ಸುಳಿವು ಪಡೆದ ಬಜರಂಗ ದಳದ ಕಾರ್ಯಕರ್ತರು ಮೇ. 4ರಂದು ಗೋ ಸಾಗಾಟ ನಿರತನಾಗಿದ್ದ ಜಯಂತ ಗೌಡನ ವಾಹನದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು. ಪರಿಶೀಲನೆಗೆ ಒಳಪಡಿಸಿದಾಗ ಅದರಲ್ಲಿ ವಾಹನದಲ್ಲಿ ಯಾವುದೇ ದಾಖಲೆಗಳಿಲ್ಲದೆ ನಾಲ್ಕು ಜಾನುವಾರುಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಈ ಹಿನ್ನಲೆಯಲ್ಲಿ ವಾಹನ ಚಾಲಕ ಜಯಂತ್ ಗೌಡ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ಕುಪ್ಪೆಟ್ಟಿಯ ಬದ್ರುದ್ದೀನ್ ಎಂಬಾತನಿಗೆ ಬೇಕಾಗಿ ಜಾನುವಾರುಗಳನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದ್ದು ಘಟನೆಗೆ ಸಂಬಂಧಿಸಿದಂತೆ ಮೂವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here