Site icon Suddi Belthangady

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ – ಧನುಷ್ ಸಿ. ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾತ್ಮಕ ವೀಡಿಯೋ ಹರಿಬಿಟ್ಟ ಯುವಕನ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ನಿವಾಸಿ ಧನುಷ್ ಸಿ. ಪಕ್ಕಳ ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ. ಧನುಷ್ ಸಮುದಾಯಗಳ ನಡುವೆ ಕೋಮುದ್ವೇಷ ಉಂಟಾಗಿ, ಕಾನೂನು ಸುವ್ಯವಸ್ಥೆ ಗೆ ಧಕ್ಕೆಯಾಗುವಂತಹ ಪ್ರಚೋದನಾತ್ಮಕ ವೀಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಮೇ. 4ರಂದು ಆತನ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ 30/2025 : 196(1) (A), 353(1) (C) BNS-2023 3 ರಂತೆ ಪ್ರಕರಣ ದಾಖಲಿಸಲಾಗಿದೆ.

Exit mobile version