ಮಿತ್ತಬಾಗಿಲು: 2025ನೇ ಸಾಲಿನ ಎಸ್. ಎಸ್. ಎಲ್. ಸಿ ಪಬ್ಲಿಕ್ ಪರೀಕ್ಷೆಗೆ ಶಾಲೆಯ 35 ವಿದ್ಯಾರ್ಥಿಗಳು ಹಾಜರಾಗಿದ್ದು, ಇವರಲ್ಲಿ 5 ಮಂದಿ ಡಿಸ್ಟಿಂಕ್ಷನ್ನಲ್ಲಿಯೂ, 23 ಮಂದಿ ಪ್ರಥಮ ಶ್ರೇಣಿಯಲ್ಲಿ ಮತ್ತು 7 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಶ್ರೀಮುಕ್ತಿ 587 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ, ಪ್ರಥ್ವಿ 580 ಅಂಕಗಳೊಂದಿಗೆ ಶಾಲೆಗೆ ದ್ವಿತೀಯ ಸ್ಥಾನ ಮತ್ತು ಜಿ. ರಶ್ಮಿತಾ ಕುಮಾರಿ ಮತ್ತು ಲತನ್ಯ 551 ಅಂಕಗಳೊಂದಿಗೆ ಶಾಲೆಗೆ ತೃತೀಯ ಸ್ಥಾನ ಪಡೆದಿರುತ್ತಾರೆ.
ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸದಸ್ಯರು ಗ್ರಾಮ ಪಂಚಾಯತ್ ಮಿತ್ತಬಾಗಿಲು, ಶಾಲಾ ಮುಖ್ಯ ಶಿಕ್ಷಕರು, ಸಹಶಿಕ್ಷಕರು, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯಧ್ಯಕ್ಷರು ಮತ್ತು ಸರ್ವ ಸದಸ್ಯರು, ಪೋಷಕರು ಹಾಗೂ ಊರಿನ ವಿದ್ಯಾಭಿಮಾನಿಗಳು ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ತಿಳಿಸಿರುತ್ತಾರೆ.