ಆಪರೇಷನ್ ಸಿಂಧೂರ್ : ಬೆಳ್ತಂಗಡಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆಗಾಗಿ ಸೈನಿಕರನ್ನು ಅಭಿನಂದಿಸಿ ಕಾರ್ಯಕ್ರಮ ನಡೆಯಿತು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ದೇಶದ ಐಕ್ಯತೆ, ಸಮಗ್ರತೆ, ಸಾರ್ವಭೌಮತ್ವಗಾಗಿ ಕಾಂಗ್ರೆಸ್ ಪಕ್ಷ ತ್ಯಾಗ, ಬಲಿದಾನ ಮಾಡಿದನ್ನು ಈ ದೇಶದ ಇತಿಹಾಸದಿಂದ ಅಳಿಸಲು ಅಸಾಧ್ಯ. ನಮ್ಮ ದೇಶದ ವಿರುದ್ಧ ಯಾವುದೇ ದೇಶ ಯುದ್ಧ ಸಾರಿದರೂ ನಮ್ಮ ಪಕ್ಷ ದೇಶದ ಪರವಾಗಿ ಸದಾಕಾಲವೂ ನಿಲ್ಲುತ್ತದೆ.
ನಮ್ಮ ದೇಶದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಜೈನ, ಪಾರ್ಸಿ ಎಂಬುದನ್ನು ಮರೆತು ಒಂದಾಗುವ ಕಾಲ ಇದು. ಆದರೆ ಕೆಲವರು ಧರ್ಮದ ಹೆಸರಿನಲ್ಲಿ ರಾಜಕೀಯ ನಡೆಸುತ್ತಿರುವುದು ಅಸಹ್ಯವಾಗಿದೆ. ಆಪರೇಶನ್ ಸಿಂಧೂರದಲ್ಲಿ ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದ್ದು ಓರ್ವ ಮುಸ್ಲಿಂ ಮಹಿಳಾ ಸೇನಾಧಿಕಾರಿ ಎಂಬುದನ್ನು ನಾವು ಶ್ಲಾಘಿಸಬೇಕು ಎಂದರು.
ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ ಕುಮಾರ್, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಮಹಿಳಾ ಕಾಂಗ್ರೆಸ್ ನಗರ ಅಧ್ಯಕ್ಷೆ ವಂದನಾ ಭಂಡಾರಿ, ಗ್ರಾಮೀಣ ಬ್ಲಾಕ್ ಅಧ್ಯಕ್ಷೆ ನಮಿತಾ ಪೂಜಾರಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಮ್ ಕೊಕ್ಕಡ, ಉಪಾಧ್ಯಕ್ಷರುಗಳಾದ ಅರುಣ್ ಲೋಬೊ, ನವೀನ್ ಗೌಡ, ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಅಝರ್ ನಾವೂರು, ಮಚ್ಚಿನ ಪಂಚಾಯತ್ ಸದಸ್ಯ ಪ್ರಮೋದ್ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.