
ಬೆಳ್ತಂಗಡಿ: ದುಷ್ಕರ್ಮಿಗಳಿಗೆ ಬಲಿಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಗೆ ಮೇ.11 ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಸಾಯಿರಾಂ ಫ್ರೆಂಡ್ಸ್ ವತಿಯಿಂದ ನುಡಿನಮನ ಸಲ್ಲಿಸಲಾಯಿತು.

ಈ ವೇಳೆ ಶಾಸಕ ಹರೀಶ್ ಪೂಂಜ, ಉದ್ಯಮಿ ಶಶಿಧರ್ ಶೆಟ್ಟಿ ಬರೋಡ, ವಿಶ್ವ ಹಿಂದೂ ಪರಿಷತ್ ಮುಖಂಡ ನವೀನ್ ನೆರಿಯ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಸುಹಾಸ್ ಶೆಟ್ಟಿ ಮಾವ ಚಂದ್ರಶೇಖರ್ ಶೆಟ್ಟಿ ಪುಳಿಮಜಲು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಭಾಗವಹಿಸಿದ್ದರು.