ಉಜಿರೆ: ಗ್ರಾಮ ಪಂಚಾಯತ್ ವ್ಯಾಪ್ತಿಯ ಉಜಿರೆ ಬಸ್ ನಿಲ್ದಾಣದ ಬಳಿ ಮೇ. 13ರಂದು ಸುಮಾರು 45 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಪಂಚಾಯತ್ ಅಧಿಕಾರಿಗಳು ಹಾಗೂ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ.