ಬೆಳ್ತಂಗಡಿ: ಕರ್ನಾಟಕ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿಯೂ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ರಂಗದಲ್ಲಿ ವಿವಿಧ ರೂಪದಲ್ಲಿ ಕಾರ್ಯಾಚರಿಸುತ್ತಿರುವ ಸುನ್ನೀ ಸಂಘ ಕುಟುಂಬದ ಸಂಘಟನೆಗಳಾದ ಸುನ್ನೀ ಜಂಇಯ್ಯತುಲ್ ಉಲಮಾ (ಎಸ್.ಜೆ.ಯು) ಕರ್ನಾಟಕ ಮುಸ್ಲಿಂ ಜಮಾಅತ್ (ಕೆ.ಎಂ.ಜೆ) ಸುನ್ನೀ ಯುವಜನ ಸಂಘ (ಎಸ್.ವೈ.ಎಸ್), ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್.ಎಸ್.ಎಫ್) ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್.ಜೆ.ಎಂ) ಸುನ್ನೀ ಮ್ಯಾನೇಜ್ಮೆಂಟ್ ಅಸೋಷಿಯೇಶನ್ (ಎಸ್.ಎಂ.ಎ) ಬೆಳ್ತಂಗಡಿ ತಾಲೂಕಿನ ನಾಯಕರನ್ನೊಳಗೊಂಡ ಬೆಳ್ತಂಗಡಿ ತಾಲೂಕು ಸುನ್ನೀ ಕೋ ಆರ್ಡಿನೇಷನ್ ಸಮಿತಿಯನ್ನು ಮೇ. 9ರಂದು ಅಲ್ ಖಾದಿಸ ಕಾವಲಕಟ್ಟೆ ಸಂಸ್ಥೆಯಲ್ಲಿ ಅಸ್ತಿತ್ವಕ್ಕೆ ತರಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುನ್ನೀ ಸಂಯುಕ್ತ ಜಮಾಅತ್ ಅಧ್ಯಕ್ಷ ಅಸ್ಸಯ್ಯಿದ್ ಇಸ್ಮಾಯಿಲ್ ಅಲ್ ಹಾದಿ ತಂಙಳ್ ಉಜಿರೆ ವಹಿಸಿ ದುಆ ನೆರವೇರಿಸಿದರು. ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಬಾಅಲವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕರ್ನಾಟಕ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಕೆ. ಪಿ. ಹುಸೈನ್ ಸಅದಿ ಕೆ.ಸಿ. ರೋಡ್ ವಿಷಯ ಮಂಡಿಸಿದರು.
ಬೆಳ್ತಂಗಡಿ ತಾಲೂಕು ಸುನ್ನೀ ಕೋ ಆರ್ಡಿನೇಷನ್ ಸಮಿತಿಯ ನಿರ್ದೇಶಕರಾಗಿ ಅಸ್ಸಯ್ಯಿದ್ ಇಸ್ಮಾಯಿಲ್ ಅಲ್ ಹಾದಿ ತಂಙಳ್ ಉಜಿರೆ, ಡಾ! ಮುಹಮ್ಮದ್ ಫಾಝಿಲ್ ರಝ್ವಿ ಕಾವಲಕಟ್ಟೆ ಹಝ್ರತ್, ಅಸ್ಸಯ್ಯಿದ್ ಜಲಾಲುದ್ದೀನ್ ಅಲ್ ಹಾದಿ ತಂಞಳ್ ಮಲ್ಜಹ್, ಅಸ್ಸಯ್ಯಿದ್ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು, ಅಸ್ಸಯ್ಯಿದ್ ಅಬ್ದುಸ್ಸಲಾಂ ಅಲ್ ಹಾದಿ ತಂಙಳ್ ಪುಂಜಾಲಕಟ್ಟೆ, ಅಧ್ಯಕ್ಷರಾಗಿ ಅಸ್ಸಯ್ಯಿದ್ ಅಬ್ದುಲ್ ರಹಮಾನ್ ಸಾದಾತ್ ತಂಙಳ್ ಉಳ್ತೂರು, ಕಾರ್ಯಾಧ್ಯಕ್ಷರಾಗಿ ಉಮರ್ ಜಿ. ಕೆ. ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ, ಕೋಶಾಧಿಕಾರಿ ಮುಹಮ್ಮದ್ ರಫಿ ಬೆಳ್ತಂಗಡಿ, ಉಪಾಧ್ಯಕ್ಷರುಗಳಾಗಿ ಅಸ್ಸಯ್ಯಿದ್ ಉಮರ್ ಅಸ್ಸಖಾಫ್ ತಂಙಳ್ ಮನ್ಸರ್, ಅಸ್ಸಯ್ಯಿದ್ ಪಝಲ್ ಜಮಲುಲ್ಲೈಲಿ ತಂಙಳ್ ವಾದಿ ಇರ್ಫಾನ್, ಅಸ್ಸಯ್ಯಿದ್ ಎಸ್. ಎಮ್. ಕೋಯ ತಂಙಳ್ ಉಜಿರೆ, ಜೆ. ಹೆಚ್ ಅಬೂಬಕ್ಕರ್ ಸಿದ್ದೀಖ್ ಕಾಜೂರು, ಹಂಝ ಮದನಿ ಕಾಂತಿಜಾಲು, ಅಬ್ದುರ್ರಝಾಖ್ ಸಖಾಫಿ ಮಡಂತ್ಯಾರು, ಕಾರ್ಯದರ್ಶಿಗಳಾಗಿ ಎಂ.ಎ. ಕಾಸಿಂ ಮುಸ್ಲಿಯಾರ್ ಮಾಚಾರು, ಮುಹಮ್ಮದ್ ಅಲಿ ತುರ್ಕಲಿಕೆ, ಉಮರ್ ಕುಂಞಿ ನಾಡ್ಜೆ ಇಸಾಖ್ ಅಳದಂಗಡಿ, ಅಬ್ದುರ್ರಹ್ಮಾನ್ ಸಖಾಫಿ ಆಲಂದಿಲ ಹಾಗೂ 28 ಸದಸ್ಯರುಗಳನ್ನು ಆರಿಸಲಾಯಿತು. ಅಬ್ದುರ್ರಝಾಕ್ ಸಖಾಫಿ ಮಡಂತ್ಯಾರು ಸ್ವಾಗತಿಸಿದರು. ಅಬ್ದುರ್ರಹ್ಮಾನ್ ಸಖಾಫಿ ಆಲಂದಿಲ ವಂದಿಸಿದರು.