Site icon Suddi Belthangady

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಪ್ರತಿಷ್ಠಾ ದಿನಾಚರಣೆ, ವಾರ್ಷಿಕ ಮಹಾಸಭೆ

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಮೇ 15ರಂದು ಕ್ಷೇತ್ರದ ಆನುವಂಶಿಕ ಆಡಳಿತ ಮೊಕ್ತೇಸರ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ಬ್ರಹ್ಮ ಶ್ರೀ ವೇದಮೂರ್ತಿ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು.

2024- 25 ನೇ ಸಾಲಿನ ಲೆಕ್ಕಪತ್ರ ಮಂಡನೆ, ವಾರ್ಷಿಕ ಮಹಾಸಭೆ ದೇವಸ್ಥಾನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನೋಟರಿ ವಕೀಲ ಶ್ರೀನಿವಾಸ ಗೌಡ ವಹಿಸಿದ್ದರು. ಆಡಳಿತ ಮೋಕ್ತೆಸರ ಜೀವಂದರ ಕುಮಾರ್ ಜೈನ್ ಬೆಳಾಲು ಗುತ್ತು, ಅಸ್ರನ್ನ ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷೆ ಮಮತಾ ದಿನೇಶ್ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಹದಿನಾಲ್ಕು ಬೈಲುವಾರು ಸಮಿತಿಯ ಪ್ರದಾನ ಸಂಚಾಲಕರು, ಸಂಚಾಲಕರು ಊರವರು, ಭಕ್ತರು ಹಾಜರಿದ್ದರು. ವ್ಯವಸ್ಥಾಪನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ದುರ್ಗಾ ಪ್ರಸಾದ್ ಕೆರ್ಮುಣ್ಣಾಯ ಸ್ವಾಗತಿಸಿದರು. ದೇವಸ್ಥಾನದ ಮೆನೇಜರ್ ಶಿವ ಪ್ರಸಾದ್ ಕೆ. ಆಯವ್ಯಯ ಮಂಡಿಸಿದರು. ವ್ಯವಸ್ಥಾಪನಾ ಸಮಿತಿಯ ಕಾರ್ಯದರ್ಶಿ ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಎಳ್ಳುಗದ್ದೆ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಸಮಿತಿಯ ಸಂಚಾಲಕಿ ಹೇಮಲತಾ ಶ್ರೀನಿವಾಸ ಗೌಡ ಗಣಪನ ಗುತ್ತು ವಂದಿಸಿದರು.

Exit mobile version