ಬೆಳ್ತಂಗಡಿ: ಸ.ಪ್ರ.ದ. ಕಾಲೇಜಿನಲ್ಲಿ ಆಂತರಿಕ ಗುಣಮಟ್ಟದ ಭರವಸೆ ಕೋಶ (IQAC) ವತಿಯಿಂದ ಸ್ಪೂರ್ತಿ 2K25 ಕಾರ್ಯಕ್ರಮವು ಕಾಲೇಜಿನ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಮೇ.16ರಂದು ಜರಗಿತು.
ಕಾರ್ಯಕ್ರಮವನ್ನು ಎಸ್.ಡಿ.ಎಂ. ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ. ಲಕ್ಷ್ಮೀನಾರಾಯಣ ಕೆ.ಎಸ್. ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಸುರೇಶ್ ವಿಟ್ಲ ಅಧ್ಯಕ್ಷತೆ ವಹಿಸಿದ್ದರು.

ಉದ್ಘಾಟನೆ ಬಳಿಕ ಲಕ್ಷ್ಮೀನಾರಾಯಣ ಕೆ.ಎಸ್. ಮಾತನಾಡಿ, ಬದಲಾಗುತ್ತಿರುವ ಜಗತ್ತಿನಲ್ಲಿ ಕೌಶಲ್ಯಗಳನ್ನು ಕಲಿತು, ಬೆಳವಣಿಗೆ ಮಾಡಿ ಕಾರ್ಯರೂಪಕ್ಕೆ ತರುವ ಮೂಲಕ ವಿದ್ಯಾರ್ಥಿ ಜೀವನವನ್ನು ರೂಪಿಸಕೊಳ್ಳಬೇಕು. ಉತ್ತಮ ಕೌಶಲ್ಯಗಳು ವಿದ್ಯಾರ್ಥಿಗಳಿಗೆ ವಯಸ್ಸಿಗೆ ಮೀರಿಗೆ ಪ್ರಬುದ್ಧತೆಯನ್ನು ನೀಡುವುದರ ಜೊತೆಗೆ ಸಮಾಜದಲ್ಲಿ ಉತ್ತಮ ವ್ಯಕ್ತಿ ಆಗಿರಲು ಸಹಾಯವಾಗುತ್ತದೆ. ನಮ್ಮ ಒಳ್ಳೆಯ ಅಭ್ಯಾಸಗಳು ಒಳ್ಳೆಯ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪದ್ಮನಾಭ ಕೆ., ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ.ರವಿ ಎಮ್.ಎನ್., ವಾಣಿಜ್ಯ ವಿಭಾಗದ ಮುಖ್ಯಸ್ಥ ರಾಜೇಶ್ವರಿ ಹೆಚ್.ಎಸ್., ವಿವಿಧ ವಿಭಾಗದ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.