Site icon Suddi Belthangady

ಉಜಿರೆ: ಮಂಗಳೂರು ವಿ.ವಿ. ಮಟ್ಟದ ಅಂತರ್ ಕಾಲೇಜು ಚರ್ಚಾಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆಯಲ್ಲಿ ಫಾತಿಮಾತ್ ರಾಫಿಯರಿಗೆ ಪ್ರಥಮ ಹಾಗೂ ತೃತೀಯ ಸ್ಥಾನ

ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರವಿಭಾಗ, ರಾಜ್ಯಶಾಸ್ತ್ರ ಸಂಘ ಮತ್ತು ರಾಜ್ಯಶಾಸ್ತ್ರ ಹಳೆವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಮೇ.16ರಂದು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಏರ್ಪಡಿಸಿದ್ದ “ ಸಾಮಾಜಿಕ ಜಾಲತಾಣಗಳು ಪ್ರಜಾತಂತ್ರ ವ್ಯವಸ್ಥೆಯನ್ನು ಬಲಪಡಿಸುತ್ತದೆಯೋ ಅಥವಾ ದುರ್ಬಲಪಡಿಸುತ್ತದೆಯೋ” ಎಂಬ ವಿಷಯದಲ್ಲಿ ನಡೆದ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಹಾಗೂ “ ಭಾರತದಲ್ಲಿ ನಾಗರಿಕ ಪ್ರಜ್ಞೆ “ ಎಂಬ ವಿಷಯದಲ್ಲಿ ನಡೆದ ಭಾಷಣ ಸ್ಪರ್ಧೆಯಲ್ಲಿ ತೃತೀಯ ಬಹುಮಾನವನ್ನು ನಮ್ಮ ಕಾಲೇಜಿನ ದ್ವಿತೀಯ ಬಿ.ಎಡ್. ಪ್ರಶಿಕ್ಷಣಾರ್ಥಿ ಫಾತಿಮಾತ್ ರಾಫಿಯ ಪಡೆದಿರುತ್ತಾರೆ.

ಹಾಗೆಯೇ ದ್ವಿತೀಯ ಬಿ.ಎಡ್. ಪ್ರಶಿಕ್ಷಣಾರ್ಥಿ ಮೋಹನ್ ಕುಮಾರ್ ವಿ. ಮತ್ತು ಪ್ರಥಮ ಬಿ.ಎಡ್. ಪ್ರಶಿಕ್ಷಣಾರ್ಥಿ ಸುದೀಪ್ ಮಹಾಂತೇಶ್ ಚೌಹಾಣ್ ಇವರು ಚರ್ಚಾಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇವರೆಲ್ಲರನ್ನೂ ಕಾಲೇಜಿನ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Exit mobile version