ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನ ಆಶ್ರಯದಲ್ಲಿ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಮೇ. 20ರಂದು ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವದ ಕಾರ್ಯಕ್ರಮ ನೆರವೇರಿತು.
ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಸಭಾಧ್ಯಕ್ಷತೆ ವಹಿಸಿದ್ದರು. ಬಾಳೆಹೊಸುರ ಶಿರಹಟ್ಟಿಯ ಭಾವೈಕ್ಯತಾ ಮಹಾಸಂಸ್ಥಾನ ಪೀಠದ ಮಹಾರಾಜ ನಿರಂಜನ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮಿಗಳು ಆಶೀರ್ವಚನ ನೀಡಿದರು. ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮ ಅಧ್ಯಕ್ಷೆ ಹೇಮಾವತಿ ವೀ. ಹೆಗ್ಗಡೆಯವರು ವಾರ್ಷಿಕ ವರದಿ ಬಿಡುಗಡೆ ಮಾಡಿದರು. ಬೆಂಗಳೂರಿನ ಕ್ಷೇಮವನದ ಸಿಇಒ ಶ್ತದ್ಧಾ ಅಮಿತ್ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.

ಎಸ್.ಕೆ.ಡಿ.ಆರ್.ಡಿ.ಪಿ. ಯ ಸಿಇಒ ಅನಿಲ್ ಕುಮಾರ್ ಆಶಯ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಧರ್ಮಸ್ಥಳ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಟ್ರಸ್ಟಿಗಳಾದ ಡಾ.ಪಿ.ವಿ. ಭಂಡಾರಿ, ವಿ.ರಾಮಸ್ವಾಮಿ, ದ.ಕ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಬೆಳ್ತಂಗಡಿ ತಾಲೂಕು ಜನ ಜಾಗೃತಿ ವೇದಿಕೆಯ ಅಧ್ಯಕ್ಷ ಕಾಸಿಂ ಎಂ., ಯೋಜನೆಯ ಶಾಂತಾರಾಂ ಪೈ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ್ ಬಾದಾಮಿ ಉಪಸ್ಥಿತರಿದ್ದರು. ಮೂಡಬಿದ್ರೆ ಪುನರ್ಜನ್ಮ ಆಳ್ವಾಸ್ ವ್ಯಸನಮುಕ್ತಿ ಕೇಂದ್ರ ಮುಖ್ಯ ವೈದ್ಯಾಧಿಕಾರಿ ಡಾ. ವಿನಯ ಆಳ್ವರವರು ವ್ಯಸನಿಗಳ ಪರಿವರ್ತನೆ ಮಾಡಿದ ನವಜೀವನ ಬಂಧುಗಳಿಗೆ ಜಾಗೃತಿ ಅಣ್ಣ/ಮಿತ್ರ ಪ್ರಶಸ್ತಿ ಪ್ರದಾನ ಮಾಡಿದರು.
ಧರ್ಮಸ್ಥಳ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ಕಾರ್ಯದರ್ಶಿಗಳಾದ ವಿವೇಕ್ ವಿ. ಪ್ಯಾಸ್ ಸ್ವಾಗತಿಸಿದರು. ಯೋಜನಾಧಿಕಾರಿಗಳಾದ ನಾಗರಾಜ್ ಮತ್ತು ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.