ಅರಸಿನಮಕ್ಕಿ: ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಮೇ. 20ರಿಂದ 22ರವರೆಗೆ ನಡೆಯಲಿದ್ದು ಶಿಬಿರದ ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷೆ ಗಾಯತ್ರಿ ನೆರವೇರಿಸಿದರು. ವೇದಿಕೆಯಲ್ಲಿ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್., ಪಂಚಾಯತ್ ಸದಸ್ಯರಾದ ಜನಾರ್ಧನ್, ವಿಶಾಲಾಕ್ಷಿ, ಸುಮಿತ್ರ ಉಪಸ್ಥಿತರಿದ್ದರು. ಪಂಚಾಯತ್ ಸಿಬ್ಬಂದಿಗಳಾದ ವಿಂದ್ಯಾ ಶೆಟ್ಟಿ, ಅಮಿತ ಶೆಟ್ಟಿಗಾರ್, ಉಮೇಶ್ ಗೌಡ, ಬಾಲಪ್ಪ, ಆಶಾಕಿರಣ್ ಶಿಬಿರಕ್ಕೆ ಸಹಕರಿಸಿದರು. ಆಶಾ ಕಾರ್ಯಕರ್ತೆ ಸರೋಜಿನಿ ರವರು ಮಕ್ಕಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಸ್ವಾಗತವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಕೆ., ಧನ್ಯವಾದವನ್ನು ಗ್ರಂಥಾಲಯ ಮೇಲ್ವಿಚಾರಕಿ ಮಮತಾ ನೆರವೇರಿಸಿದರು.
ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
