Site icon Suddi Belthangady

ಮೇ.25: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ:ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ: ಶ್ರೀ ಆದಿಚುಂಚನಗಿರಿ ಕಾವೂರು ಮಹಾಸಂಸ್ಥಾನ ಶಾಖಾ ಮಠದ ಸ್ವಾಮೀಜಿ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಭಾಗಿ: ಪತ್ರಿಕಾಗೋಷ್ಠಿ

ಬೆಳ್ತಂಗಡಿ: ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ವತಿಯಿಂದ ಪದಗ್ರಹಣ ಸಮಾರಂಭ, ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮೇ.25ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಮೇ.20ರಂದು ಸಿವಿಸ್ ಹಾಲ್‌ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಹೇಳಿದರು.

ಕಾವೂರು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ದಕ್ಷಿಣ ಕನ್ನಡ ಒಕ್ಕಲಿಗ ಸೇವಾ ಸಂಘದ ಅಧ್ಯಕ್ಷ ಡಿ.ಬಿ.ಬಾಲಕೃಷ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಹಲವು ಗಣ್ಯರು ಭಾಗಿ: ಈ ಕಾರ್ಯಕ್ರಮಕ್ಕೆ ಹಲವು ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಒಕ್ಕಲಿಗರ ಮಾಜಿ ಅಧ್ಯಕ್ಷ ಹಾಗೂ ಶಾಸಕರಾಗಿರುವಂತಹ ಸಿ.ಎನ್. ಬಾಲಕೃಷ್ಣ, ಶಾಸಕ ಟಿ.ಡಿ. ರಾಜೇಗೌಡ, ಮಾಜಿ ಸಚಿವ ಗಂಗಾಧರ ಗೌಡ, ಮಾಜಿ ಸಂಸದ ಪ್ರತಾಪ್ ಸಿಂಹ, ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಉಮಾಪತಿ ಶ್ರೀನಿವಾಸ ಗೌಡ, ಬೆಂಗಳೂರು ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ರೇಣುಕಾ ಪ್ರಸಾದ್, ಸುಳ್ಯ ಕೆ.ವಿ.ಜಿ ವಿದ್ಯಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕುಮಾರ್, ಬೇಗೂರು ಶ್ರೀ ನಾಗನಾಥೇಶ್ವರ ಕ್ಷೇತ್ರದ ಧರ್ಮದರ್ಶಿ ನಾರಾಯಣ ಗೌಡ ಬೇಗೂರು, ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಚೇರಮೆನ್ ಉಮೇಶ್ ಗೌಡ, ಉಜಿರೆ ಮಹಿಳಾ ಗೌಡರ ಒಕ್ಕಲಿಗರ ಅಧ್ಯಕ್ಷೆ ಅಪರ್ಣಾ ಶಿವಕಾಂತ್ ಗೌಡ, ಸುಳ್ಯ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ್, ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ, ಮಂಗಳೂರು ಒಕ್ಕಲಿಗರ ಸೇವಾ ಸಂಘದ ಉಪಾಧ್ಯಕ್ಷ ಭಾಸ್ಕರ ದೇವಸ್ಯ, ವಕೀಲ ಸುಧೀರ್ ಮರೋಳಿ, ಕಡಬ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಉಪಾಧ್ಯಕ್ಷ ಸುರೇಶ್ ಗೌಡ ಬೈಲು, ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಯುವ ಘಟಕದ ಅಧ್ಯಕ್ಷ ಕಿರಣ್ ಕುಮಾರ್ ಬಡ್ಲೆಗುತ್ತು, ಬೆಳ್ತಂಗಡಿ ಸ್ವಾಮಿ ಪ್ರಸಾದ್ ಕನ್ ಸ್ಟ್ರಕ್ಷನ್ ಮಾಲಕ ಕೆ. ಎಂ.ನಾಗೇಶ್ ಕುಮಾರ್ ಗೌಡ, ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪಿ.ಕುಶಾಲಪ್ಪ ಗೌಡ ಪೂವಾಜೆ, ಪುತ್ತೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ರವಿ ಗೌಡ ಮುಂಗ್ಲಿ ಮನೆ, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಗೌಡರ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು, ಮಂಗಳೂರು ಒಕ್ಕಲಿಗ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಸೌಮ್ಯ ಸುಕುಮಾರ್, ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಸಿ.ಕುಶಾಲಪ್ಪ ಗೌಡ, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷ ವಿದ್ಯಾ ಶ್ರೀನಿವಾಸ್ ಭಾಗಿಯಾಗಿಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್‌ ನ ಗೌರವಾಧ್ಯಕ್ಷ ರಂಜನ್‌ ಜಿ.ಗೌಡ ಬೆಳ್ತಂಗಡಿ ಮತ್ತು ಕೆ.ವಿಜಯ ಗೌಡ, ವೇಣೂರು, ಕಾರ್ಯಾಧ್ಯಕ್ಷ ಶ್ರೀನಿವಾಸ್ ಗೌಡ ಬೆಳಾಲು, ಕಾರ್ಯದರ್ಶಿ ಭರತ್‌ ಗೌಡ ಬಂಗಾಡಿ, ಕೋಶಾಧಿಕಾರಿ ಸೂರಜ್‌ ಗೌಡ ವಳಂಬ್ರ, ಸ್ಥಾಪಕ ಟ್ರಸ್ಟಿಗಳಾದ ನವೀನ್ ಗೌಡ ಬಿ.ಕೆ. ನಿಡ್ಲೆ ವಸಂತ ಗೌಡ ಮರಕಡ ಮಚ್ಚಿನ, ಟ್ರಸ್ಟಿಗಳಾದ ರಾಜೇಶ್, ಸುಂದರ ಗೌಡ ಉಡೇರೆ ಹತ್ಯಡ್ಕ ಇದ್ದರು.

Exit mobile version