ಬೆಳ್ತಂಗಡಿ: ತಾಲೂಕಿನ ಕೃಷಿ ಇಲಾಖೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಲಭ್ಯವಿದೆ ಎಂದು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಭತ್ತದ ಬಿತ್ತನೆಗಾಗಿ ಎಂಒ-4 (ಭದ್ರ) ತಳಿಯ ಬಿತ್ತನೆ ಬೀಜವನ್ನು ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತಾನಿರಿಸಲಾಗಿದ್ದು, ಬೆಳ್ತಂಗಡಿ, ವೇಣೂರು, ಕೊಕ್ಕಡ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ, ಬಿತ್ತನೆ ಬೀಜ ಹಾಗೂ ಇತರ ಪರಿಕರ ಪಡೆಯಬಹುದಾಗಿದೆ. ಆಸಕ್ತ ರೈತರು ಆರ್.ಟಿ.ಸಿ., ಆಧಾರ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆ ವಿವರಗಳೊಂದಿಗೆ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ, ಬಿತ್ತನೆ ಬೀಜ ಪಡೆಯಬಹುದು ಎಂದು ಕೃಷಿ ಇಲಾಖೆಯ ಬೆಳ್ತಂಗಡಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.