Site icon Suddi Belthangady

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಬೇಸಿಗೆ ಶಿಬಿರ

ಬೆಳಾಲು: ಗ್ರಾಮೀಣ ಮಕ್ಕಳಿಗಾಗಿ ಬೆಳಾಲು ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಬೇಸಿಗೆ ಶಿಬಿರದ ಸಮರೋಪ ಸಮಾರಂಭ ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಮೇ. 15ರಿಂದ ಆಯೋಜಿಸಲಾದ ಬೇಸಿಗೆ ಶಿಬಿರದ ಸಮರೋಪ ಸಮಾರಂಭವು ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಇವರ ಅಧ್ಯಕ್ಷತೆಯಲ್ಲಿ ಮೇ. 22ರಂದು ನಡೆಯಿತು.

ವೇದಿಕೆಯಲ್ಲಿ ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ ಕೆ., ಬೆಳ್ತಂಗಡಿ ತಾಲೂಕು ಪಂಚಾಯತ್ ನರೇಗಾ ತಾಂತ್ರಿಕ ಸಹಾಯಕಿ ರೇಷ್ಮಾ ಹಾಗೂ ತಾಲೂಕು ಶ್ರೀ ಶಕ್ತಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ನಿಶಾ ಬನಂದೂರು ಉಪಸ್ಥಿತರಿದ್ದರು.

ಶಿಬಿರಾರ್ಥಿಗಳು ಚಾರ್ವಿಗೆ ಪ್ರಾರ್ಥಿಸಿ, ದೀಪ್ತಿ ಸ್ವಾಗತಿಸಿದರು. ದೀಕ್ಷಾ ಶಿಬಿರದ ಅನಿಸಿಕೆಯನ್ನು ಹೇಳಿದರು. ಶಿಬಿರಾರ್ಥಿಗಳಿಗೆ ಭಾಗವಹಿಸುವಿಕೆಯ ಪ್ರಮಾಣ ಪತ್ರ ಹಾಗೂ ಸ್ಮರಣಿಕೆಯನ್ನು ನೀಡಲಾಯಿತು. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ಅರಿವು ಕೇಂದ್ರದ ಮೇಲ್ವಿಚಾರಕ ಡೀಕಯ್ಯ ಗೌಡ ಅರಣೆಮಾರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Exit mobile version