ಬೆಳ್ತಂಗಡಿ : ಎಸ್. ಎಸ್. ಎಲ್. ಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯು ಶೇ.100 ಫಲಿತಾಂಶವನ್ನು ದಾಖಲಿಸಿದೆ. ವಿದ್ಯಾರ್ಥಿನಿ ಚೈತನ್ಯ ರೈ ಹೆಚ್ಚುವರಿಯಾಗಿ 2 ಅಂಕಗಳನ್ನು ಗಳಿಸಿದ್ದು, ಒಟ್ಟು 619 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 7ನೇ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.
ವಿದ್ಯಾರ್ಥಿಗಳಾದ ಸನ ಮರಿಯಂ ಮತ್ತು ಆಸ್ಟಿನ್ ಪ್ರಜ್ವಲ್ ಫೆರ್ನಾಂಡಿಸ್ 614 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಹಾಗೂ ವಿಯೋನ ಡಿಸೋಜ 613 ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.
ಪರೀಕ್ಷೆ ಬರೆದ ಒಟ್ಟು 65 ವಿದ್ಯಾರ್ಥಿಗಳಲ್ಲಿ 28 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 29 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 8 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಶಾಲೆಯು ಸತತ 10ನೇ ಬಾರಿ ಶೇಕಡಾ 100 ಫಲಿತಾಂಶವನ್ನು ದಾಖಲಿಸಿ, ಅಮೋಘ ಸಾಧನೆಯನ್ನು ಮಾಡಿದೆ.