ಬೆಳ್ತಂಗಡಿ: ಇತ್ತೀಚೆಗೆ ರಾಜ್ಯದಲ್ಲಿ ಸರ್ಕಾರಿ ಬಸ್ ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿದ್ದು, ಪ್ರಯಾಣಿಕರು ಆತಂಕಕೀಡಾಗುವಂತಾಗಿದೆ.
ಬೆಳ್ತಂಗಡಿಯ ಮುಖ್ಯ ರಸ್ತೆಯ ಲಾಯಿಲ ಸೇತುವೆ ಬಳಿ ಧರ್ಮಸ್ಥಳದಿಂದ ಕಾರವಾರದ ಕಡೆಗೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಕೆಟ್ಟು ನಿಂತ ಘಟನೆ ಮೇ.24ರಂದು ನಡೆದಿದೆ. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗಿದ್ದು, ಸರಿಯಾದ ಸಮಯಕ್ಕೆ ತಲುಪಲು ಪರದಾಡಬೇಕಾದ ಪರಿಸ್ಥಿತಿ ಎದುರಾಯಿತು.