ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ನೇತೃತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಹಕಾರದಿಂದ ನಡೆಸುತ್ತಿರುವ ಮಹಿಳಾ ಸಬಲೀಕರಣ ಯೋಜನೆಯ ಒಕ್ಕೂಟಗಳ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿಯನ್ನು ಸಾನ್ ಟವರ್ ಬೆಳ್ತಂಗಡಿ ಇಲ್ಲಿ ಮೇ.23ರಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ನೇಹಕಿರಣ್ ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಎಲಿಯಮ್ಮ ತೋಮಸ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಡಾ. ಧನೇಶ್ವರಿ ಪ್ರಾಧ್ಯಾಪಕರು, ಸಮಾಜ ಕಾರ್ಯ ವಿಭಾಗ, ಎಸ್.ಡಿ.ಎಮ್. ಕಾಲೇಜು ಉಜಿರೆ ಇವರು ಒಕ್ಕೂಟಗಳ ಸದಸ್ಯರು ನಾಯಕತ್ವ ವಹಿಸಿ ಸಂಘಟನೆಗಳನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುವ ಬಗ್ಗೆ ತರಬೇತಿ ನೀಡಿದರು.
ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕ ಫಾ.ಬಿನೋಯಿ ಎ.ಜೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ತಾಲೂಕು ಒಕ್ಕೂಟಗಳ ಪದಾಧಿಕಾರಿಗಳು ಹಾಗೂ ಸಂಘಗಳಿಂದ ಆಯ್ಕೆ ಮಾಡಿರುವ ವಿವಿಧ ಕ್ರಿಯಾಶೀಲ ನಾಯಕರುಗಳು ಪಾಲ್ಗೊಂಡರು. ಸ್ನೇಹ ಜ್ಯೋತಿ ಒಕ್ಕೂಟದ ಉಪಾಧ್ಯಕ್ಷೆ ಜಿನ್ಸಿ ರಾಜೇಶ್ ಎಲ್ಲರನ್ನು ಸ್ವಾಗತಿಸಿದರು. ಸ್ನೇಹ ಕಿರಣ್ ಜಿಲ್ಲಾ ಒಕ್ಕೂಟದ ಕೋಶಾಧಿಕಾರಿ ಮಂಜುಳಾ ಜೋನ್ ಕಾರ್ಯಕ್ರಮ ನಿರೂಪಿಸಿದರು. ಕಿರಣ್ ತಾಲೂಕು ಒಕ್ಕೂಟದ ಜೊತೆ ಕಾರ್ಯದರ್ಶಿ ನಿಶಾ ಎಲ್ಲರನ್ನು ವಂದಿಸಿದರು.