ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ‘ಆಪ್ತ ಸಮಾಲೋಚನೆ ಮತ್ತು ವಿದ್ಯಾರ್ಥಿ ನಡವಳಿಕೆ’ ಕುರಿತು ತರಬೇತಿ ಕಾರ್ಯಾಗಾರ ಮೇ.23ರಂದು ನಡೆಯಿತು.
ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಉದ್ಘಾಟನೆ ನೆರವೇರಿಸಿ, ಶಿಕ್ಷಕರೊಂದಿಗೆ ತರಬೇತಿ ಬಗ್ಗೆ ಸಂವಾದ ನಡೆಸಿದರು. ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಶೈಕ್ಷಣಿಕ ಸಂಯೋಜಕ ಶಶಿಶೇಖರ ಎನ್. ಕಾಕತ್ಕರ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯಕುಮಾರ್, ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀ ಧ.ಮಂ. ಸ್ನಾತಕೋತ್ತರ ಕೇಂದ್ರದ ಮನಃಶಾಸ್ತ್ರ ವಿಭಾಗದ ಪ್ರಾಧ್ಯಾಪಕಿಯರಾದ ಅಶ್ವಿನಿ ಪಿ. ಶೆಟ್ಟಿ, ಸಿಂದು ವಿ., ರಮ್ಯ, ಅಶ್ವಿನಿ ಹೆಚ್. ಅವರು ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟ ಹೆಚ್ಚಳ, ವಿಶೇಷಚೇತನ ವಿದ್ಯಾರ್ಥಿಗಳ ನಿರ್ವಹಣೆ, ವಿದ್ಯಾರ್ಥಿ-ಶಿಕ್ಷಕರ ನಡುವಿನ ಸಂಬಂಧ ಕುರಿತು ಸಂವಾದ ನಡೆಸಿದರು.
ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಮನಮೋಹನ ನಾಯಕ್ ಸ್ವಾಗತಿಸಿದರು. ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಕೆ. ವಂದಿಸಿ, ಹಿರಿಯ ಶಿಕ್ಷಕ ರಾಧಾಕೃಷ್ಣ ಕಾರ್ಯಕ್ರಮ ನಿರೂಪಿಸಿದರು.