ಉಜಿರೆ: ಗ್ರಾಮದ ನೀರಚಿಲುಮೆ ಎಂಬಲ್ಲಿ ಕಾರು ಹಾಗೂ ಪಿಕಪ್ ನಡುವೆ ಅಪಘಾತ ಸಂಭವಿಸಿದ ಘಟನೆ ಮೇ.25ರಂದು ನಡೆದಿದೆ.
ಪಿಕಪ್ ವಾಹನವು ಉಜಿರೆಯಿಂದ ಧರ್ಮಸ್ಥಳ ಕಡೆಗೆ ತನ್ನ ದಿಕ್ಕಿನಲ್ಲಿ ಚಲಾಯಿಸುವ ವೇಳೆ ವಿರುದ್ಧ ದಿಕ್ಕಿನಿಂದ ಬಂದ KA41MB5831 ನೊಂದಣಿಯ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದ ಕಾರಣ ವಾಹನಗಳ ಮುಂಬಾಗ ಸಂಪೂರ್ಣ ಹಾನಿಯಾಗಿದ್ದು, ಸವಾರ ಮತ್ತು ಸಹಸವಾರರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.