ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು ಮೇ.28ರವರೆಗೆ ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

> ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, ಸಿಬಿಎಸ್ಸಿ, ಪದವಿ ಪೂರ್ವ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಮೇ. 27 ಮತ್ತು 28ರಂದು ರಜೆಯನ್ನು ಘೋಷಿಸಲಾಗಿರುತ್ತದೆ.

> ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.> ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.

> ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ, ಚಾರಣಕ್ಕೆ ತೆರಳದಂತೆ ಸೂಚಿಸಲಾಗಿದೆ.

> ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು. ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ.24×7 ಕಂಟ್ರೋಲ್ ರೂಮ್ ನಂ. 1077 6 0824 2442590

LEAVE A REPLY

Please enter your comment!
Please enter your name here