ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಮೇ. 24ರಂದು ಹಮ್ಮಿಕೊಳ್ಳಲಾಯಿತು. ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ವರದಿಯನ್ನು ಮಂಡಿಸಲಾಯಿತು. ನಂತರ 2204- 25ನೇ ಸಾಲಿನಲ್ಲಿ ಅತೀ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಹಾಗೂ ಮುಂದಿನ ವರ್ಷದ ಶಿಕ್ಷಕ ರಕ್ಷಕ ಸಂಘಕ್ಕೆ ನೂತನ ಪದಾಧಿಕಾರಿಗಳು ಹಾಗೂ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಕಾಲೇಜಿನ ಪ್ರಾಂಶುಪಾಲ ಅಲೆಕ್ಸ್ ಐವನ್ ಸಿಕ್ವೇರಾರವರು ಮಾತನಾಡಿ ವಿದ್ಯಾರ್ಥಿಗಳ ಪಠ್ಯ ಹಾಗೂ ಪಠ್ಯೇತರ ಸಾಧನೆಗಳನ್ನು ಪೋಷಕರಿಗೆ ವಿವರಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕ ಸ್ಟ್ಯಾನಿ ಗೋವಿಯಸ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸುವುದರಲ್ಲಿ ಪೋಷಕರ ಪಾತ್ರ ಮಹತ್ವವಾದುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕ ರಕ್ಷಕ ಸಂಘದ ಸಹ ಸಂಯೋಜಕ ರೋಸ್ ಪ್ರಿಯ, ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಎಲ್ಲಾ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕ ರಕ್ಷಕ ಸಂಘದ ಸಂಯೋಜಕ ಪ್ರೊ. ಈಶ್ವರ ಗೌಡ ಸ್ವಾಗತಿಸಿದರು. ಉಪನ್ಯಾಸಕಿ ರಾಜೇಶ್ವರಿ ಹಾಗೂ ಎಮರ್ಸನ್ ಕ್ರಾಸ್ತಾ ನಿರೂಪಿಸಿದರು. ಉಪನ್ಯಾಸಕ ಜನಾರ್ಧನ ರಾವ್ ವಂದಿಸಿದರು.