ಬೆಳ್ತಂಗಡಿ: ತಾಲ್ಲೂಕಿನ ಕಾಯರ್ತಡ್ಕ ಮಿಯ್ಯಾರಿನಲ್ಲಿ ವಿಪರೀತ ಮಳೆಯಿಂದಾಗಿ ರಸ್ತೆಯಲ್ಲಿ ಅಲ್ಲಲ್ಲಿ ಹೊಂಡಗಳು ನಿರ್ಮಾಣವಾಗಿದ್ದು, ವಾಹನ ಸಂಚಾರ ಕಷ್ಟವಾಗಿದೆ. ಬಸ್, ಪಿಕಪ್, ಇನ್ನೀತರ ದ್ವಿಚಕ್ರ ವಾಹನಗಳು ಹೊಂಡದಲ್ಲಿ ಸಿಲುಕಿಗೊಂಡಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಪಾಯಕಾರಿ ಗುಂಡಿಗಳಿರುವುದರಿಂದ ಅನಾಹುತ ಸಂಭವಿಸಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.
ಅದಕ್ಕಾಗಿ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ.