ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರಿಗೆ ರಕ್ಷಿತ್ ಶಿವರಾಂ ಮನವಿ

0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಘಟನೆಗಳ ಬಗ್ಗೆ, ಮೇ.29ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ರವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರು ಮಾಹಿತಿಯನ್ನು ನೀಡಿದರು.

ಜಿಲ್ಲೆಯ ಜನತೆ ಶಾಂತಿ ಸೌಹಾರ್ದತೆಯನ್ನು ಬಯಸುತ್ತಿದ್ದಾರೆ. ಆದರೆ ಕೆಲವು ವಿಘ್ನ ಸಂತೋಷಗಳು ಜಿಲ್ಲೆಯ ಶಾಂತಿಯನ್ನು ಕಾದಾಡುತ್ತಿದ್ದಾರೆ. ಮುಂದೆ ಇದಕೆಲ್ಲ ಕಡಿವಾಣ ಹಾಕಲು ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿರವರಿಗೆ ಮನವಿಯನ್ನು ಸಲ್ಲಿಸಿದರು. ವಸತಿ ಸಚಿವ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಹಾಜರಿದ್ದರು.

LEAVE A REPLY

Please enter your comment!
Please enter your name here