ತಾಲೂಕು ಪಂಚಾಯತ್ ಸಾಮಾನ್ಯ ಸಭೆ

0

ಬೆಳ್ತಂಗಡಿ: ತಾಲೂಕು ಪಂಚಾಯತಿಯ ಸಾಮಾನ್ಯ ಸಭೆಯು ಮೇ.31ರಂದು ತಾಲೂಕು ಪಂಚಾಯತಿಯ ಆಡಳಿತಾಧಿಕಾರಿ ಹಾಗೂ ದ.ಕ.ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿಯವರಾದ ಜಯಲಕ್ಷ್ಮೀ ರಾಯಕೋಡ್ ರವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆಯಿತು.

ಕಳೆದ ಸಾಮಾನ್ಯ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಬಗ್ಗೆ ಕೈಗೊಂಡ ಕ್ರಮಗಳನ್ನು ಪರಿಶೀಲಿಸಲಾಯಿತು. 2024-25ನೇ ಸಾಲಿನ ತಾಲೂಕು ಪಂಚಾಯತಿಯ ಮಾಸಿಕ ಲೆಕ್ಕ ಪತ್ರಗಳಿಗೆ ಹಾಗೂ ಇತರೆ ಇಲಾಖೆಗಳ ವಾರ್ಷಿಕ ಲೆಕ್ಕ ಪತ್ರಗಳಿಗೆ ಅನುಮೋದನೆ ನೀಡಲಾಯಿತು. 2025-26ನೇ ಸಾಲಿನ ಲಿಂಕ್ ಡಾಕ್ಯುಮೆಂಟ್ ಪ್ರಕಾರ ವಿವಿಧ ಇಲಾಖೆಗಳಿಗೆ ವಾರ್ಷಿಕವಾಗಿ ನಿಗದಿಪಡಿಸಿದ ರೂ.12829.38 ಲಕ್ಷದ ಕ್ರಿಯಾಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್ ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here